ಮತದಾನದ ಕುರಿತು ವಿದ್ಯಾರ್ಥಿಗಳು ಜಾಗೃತರಾಗಿ
Dec 05 2023, 01:30 AM ISTದೇಶದಲ್ಲಿ ದಕ್ಷ ಆಡಳಿತದ ಪ್ರಜಾ ಸರ್ಕಾರ ರಚಿಸಬೇಕಾದರೆ ವಿದ್ಯಾರ್ಥಿಗಳು ಸಕ್ರಿಯವಾಗಿ ಮತದ ಮೌಲ್ಯ ಅರಿತು ಮತದಾನ ಮಾಡಬೇಕೆಂದು ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ.ಶ್ವೇತಾ ಅಭಿಪ್ರಾಯಪಟ್ಟರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಆಡಳಿತ, ಜಿಲ್ಲಾ ಚುನಾವಣಾ ಸಾಕ್ಷರತಾ ಸಂಘ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ರಾಷ್ಟ್ರೀಯ ಮತದಾರರ ದಿನದ ಆಚರಣೆ ಅಂಗವಾಗಿ ಇತ್ತೀಚೆಗೆ ಏರ್ಪಡಿಸಿದ್ದ ಚಾಮರಾಜನಗರ ಜಿಲ್ಲಾ ಮಟ್ಟದ ಸ್ವೀಪ್ ಸ್ಪರ್ಧೆಗಳು ಹಾಗೂ ಯುವ ಮತದಾರರ ನೋಂದಣಿ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.