ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ

May 27 2025, 11:51 PM IST
ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಸ್ತು ಮೈಗೂಡಿಸಿಕೊಂಡು ಕಲಿಕೆ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎ. ಮಂಜು ಕಿವಿಮಾತು ಹೇಳಿದರು. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ ಮಾತ್ರ ಸತ್ಪ್ರಜೆ ಯಾಗಲು ಸಾಧ್ಯ. ಪಾಲಕರು ಹಣ ಆಸ್ತಿ ಗಳಿಕೆಗಿಂತಲೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದರೆ ಅಂತಹ ಕುಟುಂಬಗಳು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬಹುದು ಎಂದರು. ಶಾಲೆಗೆ ಬರುವ ವಿದ್ಯಾರ್ಥಿಗಳು ತರಗತಿಗೆ ಗೈರಾಗದಂತೆ ನೋಡಿಕೊಳ್ಳಬೇಕು, ಅರ್ಧದಲ್ಲೇ ಶಾಲೆ ಬಿಡುವ ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಿ ಶಾಲೆ ಬಿಡದಂತೆ ನೋಡಿಕೊಳ್ಳಬೇಕು ಎಂದರು