ಕಾಡಂಚಿನ ಪ್ರದೇಶದಲ್ಲಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತಿಲ್ಲ
Jul 29 2025, 01:00 AM ISTಕಾಡಂಚಿನ ಪ್ರದೇಶದಲ್ಲಿ ಸುರಕ್ಷತೆ ದೃಷ್ಟಿಗಾಗಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕಾಡುಪ್ರಾಣಿಗಳನ್ನು ನಾಶ ಮಾಡುವುದು ಘೋರ ಅಪರಾಧವಾಗುತ್ತದೆ. ಮಳೆ, ಗಾಳಿ ಇದ್ದ ಸಂದರ್ಭದಲ್ಲಿ ಮರಗಿಡಗಳು ವಿದ್ಯುತ್ ತಂತಿ ಮೇಲೆ ಬಿದ್ದು ತಂತಿ ತುಂಡಾಗಿರುತ್ತದೆ. ತಂತಿಯಲ್ಲಿ ವಿದ್ಯುತ್ ಪ್ರಸರಿಸುತ್ತಿರುವುದು ಕಣ್ಣಿಗೆ ಕಾಣುವುದಿಲ್ಲ. ಆಕಸ್ಮಿಕವಾಗಿ ಸ್ಪರ್ಶಿಸಿದರೆ ಕೆಲ ಸೆಕೆಂಡ್ ಸಮಯದಲ್ಲಿ ಪ್ರಾಣ ಹಾರಿ ಹೋಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಜಾಗ್ರತೆಯಿಂದ ಇರಬೇಕು. ಕಳ್ಳತನ, ದುರುಪಯೋಗದಂತಹ ಪ್ರಕರಣ ಕಂಡುಬಂದಲ್ಲಿ ಸಂಬಂಧಿಸಿದ ಸೆಸ್ಕ್ ಜಾಗೃತದಳ ಇಲಾಖೆಗೆ ತಿಳಿಸಬೇಕು ಎಂದರು.