ರೈತರ ಜಮೀನಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
May 01 2024, 01:16 AM ISTರಣಬಿಸಿಲಿನ ತಾಪಕ್ಕೆ ಬೆಳೆಗಳು ಒಣಗಿಹೋಗಿವೆ. ಎಲ್ಲೋ ಒಂದಷ್ಟು ಬೆಳೆಗಳು ಉಳಿದಿದ್ದು, ಅವುಗಳನ್ನಾದರೂ ಉಳಿಸಿಕೊಳ್ಳೋಣ ಎಂದರೆ ಬೆಸ್ಕಾಂ ಇಲಾಖೆ ವಿದ್ಯುತ್ ಅನ್ನು ಸರಿಯಾಗಿ ಪೂರೈಸದೇ ಕಣ್ಣಾಮುಚ್ಚಾಲೆ ಆಡುತ್ತಿದೆ. ಸಾಲ ಮಾಡಿ ಬೆಳೆಸಿದ ಬೆಳೆಗಳು ಕಣ್ಣುಮುಂದೆಯೇ ಒಣಗುತ್ತಿರುವುದನ್ನು ನೋಡಲು ಆಗುತ್ತಿಲ್ಲ. ಇದನ್ನು ಪ್ರಶ್ನಿಸಿದರೆ, ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ.