ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಮಾಸಿಕ ಸಭೆ
Jul 19 2025, 01:00 AM ISTಸಂಘದ ಅಧ್ಯಕ್ಷ ಕೇಬಲ್ ವಿಜಯಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಸಂಘದಿಂದ ತಾಲೂಕು ಮಟ್ಟದ ಉಚಿತ ಆರೋಗ್ಯ ಶಿಬಿರವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದೊಂದಿದ ಸಂಘದ ನಿರ್ದೇಶಕರು ಹಾಗೂ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಶಿಬಿರದ ಆಯೋಜನ ಮಾಡಲಾಗುವುದು ಹಾಗೂ ಹೊಸ ತಂತ್ರಜ್ಞಾನಗಳಿಂದ ಬರುತ್ತಿರುವ ಸವಾಲುಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಮ್ಮಲ್ಲಿ ಹಲವರು ಹಳೆಯ ಪದ್ಧತಿಯಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಆದರೆ, ಈಗ ಮಾರುಕಟ್ಟೆಗೆ ಬರುವ ಹೊಸ ತಲೆಮಾರಿನ ಸ್ಮಾರ್ಟ್ ಉಪಕರಣಗಳನ್ನು ರಿಪೇರಿ ಮಾಡುವುದು ನಮಗೆ ಸವಾಲಾಗುತ್ತಿದೆ.