ಉತ್ತಮ ಮಳೆಯಿಂದ ವಿದ್ಯುತ್ ಸಮಸ್ಯೆ ಅಷ್ಟಾಗಿಲ್ಲ
Jul 04 2025, 11:46 PM ISTರಾಜ್ಯದ ಎಲ್ಲಾ ಕಡೆ ಉತ್ತಮವಾಗಿ ಮಳೆ ಆಗುತ್ತಿರುವುದರಿಂದ ವಿದ್ಯುತ್ ಸಮಸ್ಯೆ ಅಷ್ಟಾಗಿ ಇಲ್ಲ. ರಾಜ್ಯದಲ್ಲಿ 2500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಟೆಂಡರ್ ಆಹ್ವಾನಿಸಿದ್ದು, 10 ಸಾವಿರ ಕೋಟಿ ರು. ಹೂಡಿಕೆಗೆ ಖಾಸಗಿ ಕಂಪೆನಿಗಳು ಮುಂದೆ ಬಂದಿವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ೨೫೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿಯವರು ಬಂಡವಾಳ ಹೂಡುತ್ತಿದ್ದು, ನಾವು ಅವರಿಂದ ವಿದ್ಯುತ್ ಖರೀದಿ ಮಾಡಿ, ರೈತರು ಸೇರಿ ಎಲ್ಲರಿಗೂ ಪೂರೈಕೆ ಮಾಡುತ್ತೇವೆ ಎಂದರು.