ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ತೀವ್ರ ಆಕ್ಷೇಪ
Feb 13 2024, 12:47 AM ISTಮಂಗಳೂರು ಮೆಸ್ಕಾಂ ಭವನದಲ್ಲಿ ಸೋಮವಾರ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಸದಸ್ಯ ಎಂ.ಡಿ. ರವಿ ಅವರು ವಿದ್ಯುತ್ ದರ ಪರಿಷ್ಕರಣೆ ಕುರಿತು ಸಾರ್ವಜನಿಕ ವಿಚಾರಣೆ ನಡೆಸಿದರು. ಆಯೋಗದ ಅಧ್ಯಕ್ಷ ಪಿ. ರವಿಕುಮಾರ್ ವರ್ಚುವಲ್ ವಿಧಾನದ ಮೂಲಕ ಭಾಗವಹಿಸಿದ್ದರು. ವಿವಿಧ ಸಂಘಟನೆಗಳು, ಕೈಗಾರಿಕೆಗಳು, ಸಾರ್ವಜನಿಕರು ದರ ಏರಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.