90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ ಶನಿವಾರ ನಡೆಯಲಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಜೆಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ನಡೆದ ಮೊದಲ ಹಂತದ ಮತದಾನದಲ್ಲಿ ಶೇ.59 ರಷ್ಟು ಮತದಾನವಾಗಿದೆ. ಕಿಶ್ತ್‌ವಾರ್‌ನಲ್ಲಿ ಅತಿ ಹೆಚ್ಚು ಮತದಾನ (ಶೇ.77) ಮತ್ತು ಪುಲ್ವಾಮಾದಲ್ಲಿ ಅತೀ ಕಡಿಮೆ (ಶೇ.46) ಮತದಾನ ದಾಖಲಾಗಿದೆ.
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿರುವ ಕುಸ್ತಿ ಪಟು ವಿನೇಶ್ ಪೋಗಟ್‌ರನ್ನು ಸೋಲಿಸಲು ಬಿಜೆಪಿ ಕ್ರೀಡಾ ಘಟಕದ ಸಹ ಸಂಚಾಲಕರನ್ನು ಕಣಕ್ಕಿಳಿಸಿದೆ.
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಅಥವಾ ಬೇರೆ ಪಕ್ಷ ಸೇರಿ ಸ್ಪರ್ಧೆ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಸಿ.ಪಿ.ಯೋಗೇಶ್ವರ್ ಬಗ್ಗೆ ಬಿಜೆಪಿ ನಾಯಕರ ಎದುರೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.