ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
Aug 06 2025, 01:30 AM ISTಬೆಳಗಾವಿಯಿಂದ- ನಿಲಜಿ (ಬೆಳಗಾವಿ- ಬಾಗಲಕೋಟೆ ರಾಜ್ಯ ಹೆದ್ದಾರಿ)ಯವರೆಗೆ ಮಾತ್ರ ನಿರ್ಮಾಣವಾಗಿರುವ ಚತುಷ್ಪಥ ರಸ್ತೆಗೆ ಇದೀಗ ಬೆಳಗಾವಿಯ ಸಾಂಬ್ರಾ ನಿಲ್ದಾಣದವರೆಗೆ ವಿಸ್ತರಣೆಗೆ ಹಸಿರು ನಿಶಾನೆ ದೊರೆತಿದೆ.ನಿಲಜಿ ಗ್ರಾಮದ ನಂತರ ದ್ವಿಪಥ ರಸ್ತೆಯಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನದಾರರ ಪರದಾಟ ತಪ್ಪಿಲ್ಲ. ಈ ಸಂಚಾರ ಸಂಕಟ ನಿಯಂತ್ರಣಕ್ಕೆ ಸಚಿವ ಸತೀಶ ಜಾರಕಿಹೊಳಿ ಮದ್ದು ಅರೆದಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದವರೆಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದೆ.