ಕರಾವಳಿಗೆ ಮೀನುಗಾರಿಕೆ ವಿಶ್ವವಿದ್ಯಾಲಯ ಅಗತ್ಯ
Nov 21 2023, 12:45 AM ISTಕರಾವಳಿಯಲ್ಲಿರಬೇಕಾದ ಮೀನುಗಾರಿಕೆ ಯುನಿವರ್ಸಿಟಿ ವಿಜಯಪುರದಲ್ಲಿರುವುದು ವಿಪರ್ಯಾಸ. ನಮ್ಮಲ್ಲಿ ಕನಿಷ್ಠ ಒಂದೇ ಒಂದು ಮೀನುಗಾರಿಕೆ ವಿಶ್ವ ವಿದ್ಯಾಲಯ ಇಲ್ಲ ಎಂದು ದಿನಕರ ಶೆಟ್ಟಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಹಾಗೂ ಹೊನ್ನಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆಶ್ರಯದಲ್ಲಿ ಪಟ್ಟಣದ ಹೋಲಿ ರೋಸರಿ ಕಾನ್ವೆಂಟ್ ಹೈಸ್ಕೂಲ್‌ನಲ್ಲಿ ಸೋಮವಾರ ನಡೆದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ 2023-24ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.