ವೈದ್ಯಕೀಯ ಅರೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಅವಶ್ಯವಿದೆ
Sep 17 2025, 01:05 AM ISTಪ್ರಸ್ತುತ ಕಾಲಘಟ್ಟದಲ್ಲಿ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಅತ್ಯಂತ ಅಗತ್ಯವಾಗಿ ಬೇಕಾಗಿದೆ. ಇಂತಹ ಸೂಕ್ತವಾದ ಸಂದರ್ಭದಲ್ಲಿ ಸ್ವಾಮೀಜಿಯವರು ತಮ್ಮ ದೂರದೃಷ್ಟಿಯಿಂದ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಆರಂಭಿಸಿರುವುದು ಶ್ಲಾಘನೀಯವಾದುದು ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು. ನಮ್ಮ ರಾಜ್ಯದಲ್ಲಿ ಕ್ಯಾನ್ಸರ್ ಕಾಯಿಲೆ ಬಹುಬೇಗ ಹರಡುತ್ತಿರುವ ರೋಗವಾಗಿದ್ದು, ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಬಹುಮುಖ್ಯ ಕಾರಣವಾಗಿದೆ. ಇದು ಹೀಗೆ ಮುಂದುವರಿದರೆ ತಾಲೂಕಿಗೆ ಒಂದು ಕ್ಯಾನ್ಸರ್ ಆಸ್ಪತ್ರೆ ತೆರೆಯಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.