ಗುಣಮಟ್ಟದ ಚಿಕಿತ್ಸೆಗೆ ಆಧುನಿಕ ವೈದ್ಯಕೀಯ ಉಪಕರಣ ಅಗತ್ಯ: ಡಾ.ವೀರಣ್ಣ ಚರಂತಿಮಠ

Feb 12 2024, 01:36 AM IST
ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅರವಳಿಕೆ ಶಾಸ್ತ್ರ ವಿಭಾಗ ಮತ್ತು ಭಾರತೀಯ ಅರವಳಿಕೆ ಶಾಸ್ತ್ರಜ್ಞರ ಸಂಘದ ಕರ್ನಾಟಕ ರಾಜ್ಯ ಶಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಪರೀಕ್ಷೆ ಸಂಬಂಧಿತ ಕಾರ್ಯಾಗಾರದಲ್ಲಿ ವೈದ್ಯಕೀಯ ಉಪಕರಣಗಳ ಪ್ರದರ್ಶನ ಮಳಿಗೆಗಳನ್ನು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಉದ್ಘಾಟಿಸಿದರು. ಬಳಿಕ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಆಧುನಿಕ ವೈದ್ಯಕೀಯ ಉಪಕರಣಗಳು ಅಗತ್ಯವಾಗಿವೆ. ಹೊಸ ತಂತ್ರಜ್ಞಾನದ ಉಪಕರಣಗಳನ್ನು ವೈದ್ಯರು ಬಳಸಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.