ಆ್ಯಂಬುಲೆನ್ಸ್‌ಗೆ ಜಿಪಿಎಸ್ ಅಳವಡಿಸಿ: ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ ಪಾಟೀಲ್
Dec 22 2023, 01:30 AM ISTಕಲಬುರಗಿ ಜಿಲ್ಲೆಯಲ್ಲಿ ರಸ್ತೆ ಅಪಘಾತ, ಹೆರಿಗೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆ ಬಗ್ಗೆ ಇಲ್ಲದ ಮಾಹಿತಿ ನೀಡಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವ 108 ಆ್ಯಂಬುಲೆನ್ಸ್ ವಾಹನ ಚಾಲಕರ ದಂಧೆಗೆ ಕಡಿವಾಣ ಹಾಕಬೇಕು. ರಸ್ತೆ ಅಪಘಾತ ಪ್ರಕರಣದಲ್ಲಿ ತುರ್ತು ಚಿಕಿತ್ಸೆ ಅವಶ್ಯಕತೆ ಇರುತ್ತದೆ. ಇಂತಹ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್ ವಾಹನ ಚಾಲಕರು ಜಿಮ್ಸ್ ಆಸ್ಪತ್ರೆಗೆ ಹೋದರೆ ಅಲ್ಲಿ ವೈದ್ಯರಿರಿಲ್ಲ. ಸರಿಯಾಗಿ ಚಿಕಿತ್ಸೆ ಸಿಗಲ್ಲ ಎಂಬಿತ್ಯಾದಿ ಸುಳ್ಳು ಹೇಳಿ ಪ್ರತಿಷ್ಠಿತ ಖಾಸಗಿ ಅಸ್ಪತ್ರೆಗೆ ಸೇರಿಸುತ್ತಿದ್ದಾರೆ.