ಸ್ವಾತಂತ್ರ್ಯ, ಶಾಂತಿ, ಸೌಹಾರ್ದಯುತ ಬದುಕು ನಮ್ಮದು: ಸಚಿವ ಜಾರ್ಜ್
Jan 27 2025, 12:46 AM IST ಚಿಕ್ಕಮಗಳೂರು, ನಮ್ಮ ದೇಶ ಸ್ವಾತಂತ್ರ್ಯ ಭಾರತ ಎಂದು ಹೆಮ್ಮೆ ಪಡಲು ಹಾಗೂ ಗಣ ರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನ ಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರುಗಳನ್ನು ಹರಿಸಿ ಸ್ಥಾಪಿಸಿದ ನಮ್ಮ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯದ ಉಸಿರಿನೊಂದಿಗೆ ಶಾಂತಿ ಹಾಗೂ ಸೌಹಾರ್ದಯುತ ಬದುಕಿನ ಅನುಭವವನ್ನು ಪಡೆಯುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.