ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕನ್ನಡಪ್ರಭ ಯುವ ಆವೃತ್ತಿ ವಿತರಣೆ

Sep 09 2025, 01:00 AM IST
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ವಹಿಸಿ ವ್ಯಾಸಂಗ ಮಾಡಬೇಕು. ಪತ್ರಿಕೆ ಹಾಗೂ ಪುಸ್ತಕಗಳನ್ನು ನಿರಂತರವಾಗಿ ಓದುವುದರಿಂದಾಗಿ ಜ್ಞಾನಾರ್ಜನೆ ಆಗುತ್ತದೆ. ಕನ್ನಡಪ್ರಭ ದಿನಪತ್ರಿಕೆ ಬಳಗದವರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇವಲ ಒಂದು ರುಪಾಯಿ ವೆಚ್ಚದಲ್ಲಿ ಯುವ ಆವೃತ್ತಿಯನ್ನು ನೀಡುತ್ತಿರುವುದು ಶ್ಲಾಘನೀಯ. ಈಗಿನ ಪರಿಸ್ಥಿತಿಯಲ್ಲಿ ಒಂದು ರುಪಾಯಿಗೆ ಏನೂ ಸಹ ಬರುವುದಿಲ್ಲ. ಹಾಗಾಗಿ ಕನ್ನಡಪ್ರಭ ಬಳಗದವರು ವಿದ್ಯಾರ್ಥಿಗಳಿಗೆ ಇದನ್ನು ಉಚಿತವಾಗಿ ನೀಡುತ್ತಿದ್ದಾರೆ ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಇಲಾಖೆಯಿಂದ ನಾನು ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು.