ಶಾಲೆಗಳ ಅಭಿವೃದ್ಧಿಗೆ ನನ್ನ ಶಾಲೆ ನನ್ನ ಜವಾಬ್ದಾರಿ
Jan 24 2024, 02:00 AM IST ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನನ್ನ ಶಾಲೆ-ನನ್ನ ಜವಾಬ್ದಾರಿ ಎಂಬ ಕಾರ್ಯಕ್ರಮ ರೂಪಿಸಿ, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ದಾನಿಗಳು, ಪೋಷಕರ ನೆರವು ಪಡೆದು, ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.