ಶಾಸಕರು ಮತ್ತು ತಹಸೀಲ್ದಾರ್ ನಡುವೆ ಮಾತಿನ ಚಕಮಕಿ
Sep 04 2025, 01:00 AM ISTಬುಧವಾರ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ರಮಣ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಗೆ ಆಗಮಿಸಿದ ಶಾಸಕರನ್ನು ಕಂಡ ಸಾರ್ವಜನಿಕರು ಸಭೆ ಆಯೋಜನೆಯಾಗಿದ್ದ ಸಭಾಂಗಣ ಪ್ರವೇಶಿಸಿದರು. ಇದರಿಂದ ಸಿಡಿಮಿಡಿಗೊಂಡ ತಹಸೀಲ್ದಾರ್ ಏರುಧ್ವನಿಯಲ್ಲಿ ಕೊಠಡಿಯಿಂದ ಹೊರಗಿರುವಂತೆ ಸಾರ್ವಜನಿಕರಿಗೆ ಸೂಚಿಸಿದರು. ತಹಸೀಲ್ದಾರ್ ವರ್ತನೆಯಿಂದ ಕಸಿವಿಸಿಗೊಂಡ ಶಾಸಕರು, ಯಾಕ್ರೀ ಸಾರ್ವಜನಿಕರೊಂದಿಗೆ ಕೂಗಾಡುತ್ತೀರಾ, ಮೆದುವಾಗಿ ಮಾತನಾಡಿ, ನಾವಿರುವುದೇ ಸಾರ್ವಜನಿಕರ ಕೆಲಸ ಮಾಡಲು, ಅವರು ಕಟ್ಟುವ ತೆರಿಗೆಯಿಂದ ನಾವು ನೀವು ಸಂಬಳ ತೆಗೆದುಕೊಳ್ಳುತ್ತಿರುವುದು ಎಂದು ತಹಸೀಲ್ದಾರ್‌ಗೆ ಸೂಚಿಸಿದರು.