ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈಗಲೂ 60 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಬಂಡಾಯ ಗುಂಪಿನ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಪಕ್ಷ ಸಂಘಟನೆ ವೇಗ ಕಳೆದುಕೊಂಡಿರುವುದರಿಂದ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಬೇಕು’ ಎಂದು ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ.
‘ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್‌ನ ಒಕ್ಕಲಿಗ ಶಾಸಕರು ಸಭೆ ಸೇರಿದ್ದಾರೆ ಎಂಬುದು ಶುದ್ಧ ಸುಳ್ಳು. ಊಟಕ್ಕೆ ಸೇರಿದರೆ ಅದನ್ನೇ ಸಭೆ ಎಂದು ಊಹೆ ಮಾಡಿದರೆ ಹೇಗೆ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧಿಗಳಿಗೆ ಶಕ್ತಿ ಪ್ರದರ್ಶಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಉಸ್ತುವಾರಿ ರಾಮಕೃಷ್ಣ ಕರೆ