ಗಣಿತ ಶಿಕ್ಷಕ ಮೋಹನ್ಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
Sep 27 2024, 01:27 AM ISTಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಹಾಸನ ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಜಿಲ್ಲಾಡಳಿತದಿಂದ ಅತ್ಯುತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಬೆಳವಾಡಿ ಶಾಲೆಯ ಗಣಿತ ಶಿಕ್ಷಕರಾದ ಎಂ ಮೋಹನ್ ಇವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.