ಅಂಕಗಳ ಹಿಂದೆ ಬೀಳದೇ ಸಮಗ್ರ ಶಿಕ್ಷಣ ಪಡೆಯಿರಿ
Dec 16 2024, 12:49 AM ISTಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಮಕ್ಕಳು ಸಮಗ್ರವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಶಿಕ್ಷಣವನ್ನು ಕಲಿಯಬೇಕು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಕಾಂತರಾಜು ತಿಳಿಸಿದರು. ಪ್ರಾಪಂಚಿಕ ವಿಷಯಗಳ ಬಗ್ಗೆ ಅರಿವನ್ನು ಹೊಂದಬೇಕು ಮತ್ತು ಸಮಾನತೆ ಭ್ರಾತೃತ್ವ ಹಾಗೂ ಸಮಾಜದಲ್ಲಿ ಶಿಕ್ಷಣದಿಂದ ಉನ್ನತವಾದ ಹುದ್ದೆಗಳ ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.