ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲ್ಪಿಸುವ ಅವಶ್ಯಕತೆ ಇದೆ
Nov 30 2024, 12:46 AM ISTಆಧುನಿಕ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳನ್ನು ಸರಿಸಾಟಿಯಾಗಿ ತಯಾರು ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಹೇಳಿದರು. ಅಚೀವರ್ಸ್ ಪ್ರಜ್ಞಾ ಕಾಲೇಜಿನಲ್ಲಿ ಡಿಜಿಟಲ್ ಕ್ಲಾಸ್‌ರೂಮನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳನ್ನು ಮುಂದಿನ ಭವಿಷ್ಯಕ್ಕಾಗಿ ಸಿದ್ಧಗೊಳಿಸುವುದು ಶಿಕ್ಷಣ ಸಂಸ್ಥೆಗಳ ಗುರಿಯಾಗಬೇಕು, ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲ್ಪಿಸುವ ಅವಶ್ಯಕತೆ ಇದೆ ಎಂದು ಹೇಳಿದರು. ತಂತ್ರಜ್ಞಾನದ ವಿಕಾಸದೊಂದಿಗೆ, ಶೈಕ್ಷಣಿಕ ಸಾಮರ್ಥ್ಯಗಳು ಪ್ರತಿದಿನ ಬೆಳೆಯುತ್ತಿವೆ ಮತ್ತು ಬದಲಾಗುತ್ತಿವೆ ಎಂದರು.