ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು: ಪಿ.ಆರ್‌.ಸದಾಶಿವ ಕರೆ

Nov 08 2024, 12:35 AM IST
ನರಸಿಂಹರಾಜಪುರ, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ ಕರೆ ನೀಡಿದರು.ದಿಂಡಿನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನರಸಿಂಹರಾಜಪುರ ಗ್ರಾಮೀಣ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಕ್ಕಳು ಶ್ರದ್ಧೆ, ಏಕಾಗ್ರತೆಯಿಂದ ಶಿಕ್ಷಣ ಪಡೆಯಲು ಪೋಷಕರು ಹಾಗೂ ಶಿಕ್ಷಕರ ಸಹಕಾರ ಅಗತ್ಯವಾಗಿದೆ. ಸರ್ಕಾರ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾಗಿ ಪ್ರತಿಭಾ ಕಾರಂಜಿ, ಕ್ರೀಡಾ ಕೂಟ ನಡೆಸುತ್ತಿದೆ. ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದ, ಕುಟುಂಬದ ಹಾಗೂ ದೇಶದ ಆಸ್ತಿಯಾಗಬೇಕು ಎಂದು ಕರೆ ನೀಡಿದರು.