ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರ ಕಲುಷಿತ
May 26 2024, 01:30 AM ISTರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದ್ದು, ಈ ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕಾದರೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಓರ್ವ ಸಜ್ಜನ ರಾಜಕಾರಣಿ ವಿಧಾನ ಪರಿಷತ್ತುಗೆ ಆಯ್ಕೆಯಾಗಬೇಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಶಿಕ್ಷಣ ಕ್ಷೇತ್ರ, ಶಿಕ್ಷಕರ ಧ್ವನಿಯಾಗುವಂತೆ ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ದಾವಣಗೆರೆಯಲ್ಲಿ ಮಾಡಿದ್ದಾರೆ.