ಲಿಂಗತ್ವ ಅಲ್ಪಸಂಖ್ಯಾತರು ಶಿಕ್ಷಣ, ಉನ್ನತ ಹುದ್ದೆಗಳ ಗುರಿ ಹೊಂದಬೇಕು

Jan 18 2024, 02:02 AM IST
ಚಾಮರಾಜನಗರಲಿಂಗತ್ವ ಅಲ್ಪಸಂಖ್ಯಾತರು ಹೆಚ್ಚಿನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಏರುವ ಗುರಿ ಇಟ್ಟುಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ನೀಡಿದರು. ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಸಮತಾ ಸೊಸೈಟಿ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೈಂಗಿಕ ಮತ್ತು ಅಲ್ಪಸಂಖ್ಯಾತರ ಅರಿವು ಹಾಗೂ ಮತದಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.