ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ ಸೌಲಭ್ಯಕ್ಕೆ ಚಾಲನೆ
Oct 16 2023, 01:45 AM ISTವಿದ್ಯಾರ್ಥಿಗಳಲ್ಲಿ ಕೌಶಲ್ಯಯುತ ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣದ ಬಲವರ್ಧನೆ ಹಾಗೂ ಕೌಶಲ್ಯಯುತ ಶಿಕ್ಷಣಕ್ಕಾಗಿ ಟ್ಯಾಬ್ ವಿತರಣೆ ಕಾರ್ಯಕ್ರಮ ನಗರದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐಟಿಡಿಪಿ, ಶಾಲಾ ಶಿಕ್ಷಣ ಇಲಾಖೆ ಇನ್ಫೋಸಿಸ್ ಹಾಗೂ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.