ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಲಿ

Dec 15 2023, 01:30 AM IST
ದಲಿತ ಮತ್ತು ಬಡ ಮಕ್ಕಳು ಉನ್ನತ ಶಿಕ್ಷಣ ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರ ದೂರದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ವಸತಿ ಶಾಲೆಗಳನ್ನು ಪ್ರಾರಂಭಿಸಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೆ. ಬಡಿಗೇರ ಹೇಳಿದರು.ತಾಲೂಕಿನ ಯಡ್ಡೋಣಿ ಗ್ರಾಮದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪಾಲಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಕರು ಪ್ರತಿಯೊಬ್ಬ ಮಕ್ಕಳಿಗೆ ಶಿಕ್ಷಣ ಕೊಡಿಸುವತ್ತ ಹೆಚ್ಚಿನ ಗಮನಹರಿಸಬೇಕು ಎಂದರು.ಮಕ್ಕಳನ್ನು ಶಾಲೆಯಲ್ಲಿ ಬಿಟ್ಟು ಹೋದರಷ್ಟೇ ಸಾಲದು. ಆಗಾಗ ಬಂದು ಅವರ ಕಲಿಕೆಯ ಪ್ರಗತಿ ಬಗ್ಗೆ ಚರ್ಚಿಸಬೇಕು. ಸಣ್ಣ ಪುಟ್ಟ ಕಾರಣಗಳಿಂದಾಗಿ ಪದೇಪದೇ ಊರಿಗೆ ಕರೆದುಕೊಂಡು ಹೋಗುವುದನ್ನು ಬಿಡಬೇಕು. ಮಕ್ಕಳ ಆರೋಗ್ಯ, ಸುರಕ್ಷತೆ...