ಸರ್ಕಾರಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಿ
Jun 10 2025, 09:59 AM ISTಮೂರು ವರ್ಷಕ್ಕೂ ಮೇಲ್ಪಟ್ಟು ಮಕ್ಕಳನ್ನು ಈಗಾಗಲೇ ತಾಲೂಕಿನಲ್ಲಿ ಸ್ಥಾಪಿಸಿರುವ ಮಕ್ಕಳ ಮನೆಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಉತ್ತಮವಾದ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಶಾಸಕ ಎ. ಮಂಜು ಸಲಹೆ ನೀಡಿದರು. ಮಕ್ಕಳ ಮನೆ ಶಾಲೆಯನ್ನು ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ಹಾಗೂ ಮಧ್ಯಮ ವರ್ಗದವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಯಾವುದೇ ಆಮಿಷಗಳಿಗೆ ಒಳಗಾಗದಂತೆ ಖುದ್ದಾಗಿ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡುವ ಮೂಲಕ ಶಿಕ್ಷಣವನ್ನು ಪಡೆದುಕೊಳ್ಳಲು ಸಲಹೆ ನೀಡಿದರು.