ಆಳ್ವಾಸ್ ಶಿಕ್ಷಣ ಸಂಸ್ಥೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆ ಸಾರುತ್ತಿದೆ
Feb 10 2025, 01:49 AM ISTವಿವಿಧತೆಯಲ್ಲಿ ಏಕತೆ ಸಾಧಿಸಿದ ದೇಶ ನಮ್ಮದಾಗಿದ್ದು, ಭಾಷೆ, ವೇಷ, ಸಂಸ್ಕೃತಿ, ಆಚಾರ- ವಿಚಾರ ದೇಶದ ಶ್ರೀಮಂತಿಕೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಸಾರುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ನಡೆಸಿಕೊಡುತ್ತಿರುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ಈ ರಾಷ್ಟ್ರದ ವಿವಿಧ ಭಾಗಗಳ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಸಂಸ್ಥೆ ಮುಂದಾಗಿರುವುದು ಶ್ಲಾಘನೀಯ ಸಂಗತಿ ಎಂದರು.