ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಗುದ್ದಾಟಕ್ಕೆ ತೆರೆ

Oct 09 2025, 02:00 AM IST
ಕಳೆದ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿಯಲ್ಲಿ ಒಂದಿಷ್ಟು ಗೊಂದಲಗಳು ಏರ್ಪಟ್ಟಿದ್ದ ಪರಿಣಾಮ ಆಡಳಿತ ಮಂಡಳಿ ಕಚೇರಿಗೆ ಬೀಗ ಹಾಕಿ ಎರಡೂ ಬಣದವರೂ ಪ್ರವೇಶಿಸದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದರು. ಇಂದು ನಿರ್ಬಂಧ ತೆರವುಗೊಂಡ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಬೀಗ ತೆರೆದು ಕಚೇರಿ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಆರ್‌. ಟಿ. ದೇವೇಗೌಡ ಹಾಗೂ ಕಾರ್ಯದರ್ಶಿ ಜಗದೀಶ್ ಚೌಡುವಳ್ಳಿ ಅವರು, ದಿನಾಂಕ ೧೧-೦೧-೨೦೨೫ರಂದು ೨೦ಜನ ನಿರ್ದೇಶಕರ ಬೆಂಬಲದೊಂದಿಗೆ ಸರ್ವಾನುಮತದಿಂದ ೫ ವರ್ಷಗಳ ಅವಧಿಗೆ ನಾವು ಅಧ್ಯಕ್ಷರು-ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದು, ಇದುವರೆಗೂ ಸಹಕಾರ ಸಂಘದ ರಿಜಿಸ್ಟರ್ ಅವರಿಂದ ಆಗಲೀ, ನ್ಯಾಯಾಲಯದಿಂದಾಗಲೀ ಅಥವಾ ಸರ್ಕಾರದಿಂದಾಗಲೀ ನಮ್ಮ ಆಡಳಿತ ಮಂಡಳಿಯನ್ನು ಪದಚ್ಯತಿಗೊಳಿಸಿರುವುದಾಗಿ ತೀರ್ಪು ಅಥವಾ ಆದೇಶ ಅಧಿಕೃತವಾಗಿ ಪ್ರಕಟವಾಗಿರುವುದಿಲ್ಲ.