ದ್ವಿಭಾಷಾ ಶಿಕ್ಷಣ ನೀತಿ ಜಾರಿಗಾಗಿ ಕರವೇ ಪ್ರತಿಭಟನೆ
Jul 06 2025, 01:49 AM ISTಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಹಾಗೂ ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಫೂರ್ತಿಯನ್ನು ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕಾಗಿದೆ ಎಂದು ಒತ್ತಾಯಿಸಿದರು.