ಎಸ್ಸೆಸ್ಸೆಲ್ಸಿ ಫಲಿತಾಂಶ: ಶಿವಮೊಗ್ಗ 3ನೇ ಸ್ಥಾನಕ್ಕೆ ಜಿಗಿತ
May 10 2024, 01:37 AM ISTಕಳೆದ ಬಾರಿ ಜಿಲ್ಲಾವಾರು ಪಟ್ಟಿಯಲ್ಲಿ 28ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 3ನೇ ಸ್ಥಾನಕ್ಕೆ ಜಿಗಿದಿದ್ದು, ಶೇ. 88.67 ಫಲಿತಾಂಶ ಪಡೆದಿದೆ. ಹೊಸದಾಗಿ ಪರೀಕ್ಷೆ ತೆಗೆದುಕೊಂಡಿದ್ದ 23028 ವಿದ್ಯಾರ್ಥಿಗಳ ಪೈಕಿ 20420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಲ್ಲದೆ, ಜಿಲ್ಲೆಯ 132 ಶಾಲೆಗಳು ಶೇ.100 ಫಲಿತಾಂಶ ಪಡೆದಿವೆ. ಯಾವುದೇ ಶಾಲೆಯೂ ಈ ಬಾರಿ ಶೂನ್ಯ ಫಲಿತಾಂಶವನ್ನು ದಾಖಲಿಸಿಲ್ಲ.