ಭಾರತ ದೇಶ ವಿಶ್ವದಲ್ಲೇ ಅತಿ ದೊಡ್ಡ ಸಂವಿಧಾನ ಹೊಂದಿದ ದೇಶ: ತನುಜ ಟಿ.ಸವದತ್ತಿ
Jan 27 2025, 12:46 AM ISTನರಸಿಂಹರಾಜಪುರ, ಭಾರತ ವಿಶ್ವದಲ್ಲೇ ಅತಿ ದೊಡ್ಡ ಸಂವಿಧಾನ ಹೊಂದಿದ ದೇಶವಾಗಿದೆ ಎಂದು ತಹಸೀಲ್ದಾರ್ ತನುಜಾ ಟಿ.ಸವದತ್ತಿ ತಿಳಿಸಿದರು.ಭಾನುವಾರ ಕುವೆಂಪು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ರಾಷ್ಟ್ರ ದ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಪ್ರಜೆಗಳಿಂದ, ಪ್ರಜೆಗಳಿಗೋಸ್ಕರ ನಡೆಸುವ ಆಡಳಿತವೇ ಪ್ರಜಾ ಪ್ರಭುತ್ವ. ಪ್ರಜಾಪ್ರಭುತ್ವವ ಜಾತ್ಯಾತೀಯತೆಯನ್ನು ಎತ್ತಿ ಹಿಡಿಯುತ್ತದೆ. ನಮ್ಮ ಸಂವಿಧಾನ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂದು ಮೂರು ಅಂಗಗಳಾಗಿ ವಿಭಜಿಸಲಾಗಿದೆ. ಸರ್ಕಾರ ಮಾಡುವ ಪ್ರತಿಯೊಂದು ಕಾನೂನು ಸಹ ಸಂವಿಧಾನಕ್ಕೆ ಅನುಗುಣವಾಗಿರಬೇಕು ಎಂದರು.