‘ರಕ್ತದ ರುಚಿ ಕಂಡಿದ್ದ ಕಾಂಗ್ರೆಸ್ ಪದೇ ಪದೇ ಸಂವಿಧಾನಕ್ಕೆ ಹಾನಿ ಮಾಡಿತು. ಆದರೆ 2014ರಲ್ಲಿ ನಮ್ಮ ಸರ್ಕಾರ ಬಂದ ನಂತರ, ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂವಿಧಾನದ ದೃಷ್ಟಿಗೆ ಅನುಗುಣವಾಗಿ ನೀತಿ-ನಿರ್ಧಾರ ಕೈಗೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಸಂವಿಧಾನವು ಆಧುನಿಕ ಭಾರತದ ದಾಖಲೆಯಾದರೂ, ಪ್ರಾಚೀನ ಭಾರತ ಹಾಗೂ ವಿಚಾರಗಳಿಲ್ಲದೆ ಅದನ್ನು ಬರೆಯಲಾಗದು. ಆದರೆ ವೀರ ಸಾವರ್ಕರ್ ಅವರು ಸಂವಿಧಾನದಲ್ಲಿ ಭಾರತೀಯತೆ ಇಲ್ಲ ಎನ್ನುತ್ತಿದ್ದರು. ಈಗ ಬಿಜೆಪಿ ಸಂವಿಧಾನದ ರಕ್ಷಣೆಯ ಬಗ್ಗೆ ಮಾತನಾಡಿ ಅವರನ್ನು ಗೇಲಿ ಮಾಡುತ್ತಿದೆ