ಅಂಬೇಡ್ಕರ್ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ನೀಡಿದ್ದಾರೆ: ಎಂ.ಎನ್.ನಟರಾಜು
Nov 28 2024, 12:33 AM ISTಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲೇ ಅತಿ ಶ್ರೇಷ್ಠವಾದ ಸಂವಿಧಾನವನ್ನು ದೇಶಕ್ಕೆ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ನೆಹರು ಯುವ ಕೇಂದ್ರ ದಕ್ಷಿಣ ಪ್ರಾಂತ್ಯದ ಮಾಜಿ ನಿರ್ದೇಶಕ ಎಂ.ಎನ್.ನಟರಾಜು ಹೇಳಿದರು. ಚಾಮರಾನಗರದಲ್ಲಿ ಕನ್ನಡ ರಾಜ್ಯೋತ್ಸವದ 26ನೇ ದಿನದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆ, ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಮಾತನಾಡಿದರು.