ಸಂವಿಧಾನ ಪೀಠಿಕೆಯನ್ನು ಓದಿಸಿ ಕಾರ್ಯಕ್ರಮ ಯಶಸ್ವಿ
Sep 16 2024, 01:47 AM ISTಬೇಲೂರು ಪಟ್ಟಣದ ನೆಹರೂ ನಗರದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ನೆಹರೂ ವೃತ್ತದ ಬಳಿ ಬೃಹತ್ ಮಾನವ ಸರಪಳಿ ನಿರ್ಮಿಸಿ ನಾಡಗೀತೆ ಹಾಡಿ, ಸಂವಿಧಾನ ಪೀಠಿಕೆಯನ್ನು ಓದಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಇದೊಂದು ವಿಶೇಷವಾದ ದಿನ. ನಾಡಿಗೆ ಕೆಆರ್‌ಎಸ್ ಡ್ಯಾಮ್ ಕಟ್ಟುವುದರ ಮೂಲಕ ನಾಡಿಗೆ ನೀರುಣಿಸಿದ ಸರ್ ಎಂ ವಿಶ್ವೇಶ್ವರಯ್ಯ ದಿನಾಚರಣೆಯೂ ಕೂಡ ಆಗಿದ್ದು, ಎಲ್ಲರನ್ನೂ ಗೌರವಿಸುವ ಕೆಲಸ ಈ ರಾಜ್ಯ ಸರ್ಕಾರ ಮಾಡುತ್ತಾ ಇದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಸಂಘಟನೆಗಳು, ಅಧಿಕಾರಿಗಳ ವರ್ಗ, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಪ್ರಗತಿಪರರೆಲ್ಲಾ ಸೇರಿ ಈ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಎಂದು ಶಾಸಕ ಎಚ್ ಕೆ ಸುರೇಶ್ ಹೇಳಿದರು.