ಸಂವಿಧಾನ ಜಾಗೃತಿ ಜಾಥಾ: ಭದ್ರಾವತಿಯಲ್ಲಿ ಬೃಹತ್ ಮೆರವಣಿಗೆ
Feb 24 2024, 02:30 AM ISTಭದ್ರಾವತಿ ತಾಲೂಕಿನಾದ್ಯಂತ 5 ದಿನ ಕಾಲ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಶುಕ್ರವಾರ ಮುಕ್ತಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಇದಕ್ಕೂ ಮೊದಲು ಅಂಡರ್ ಬ್ರಿಡ್ಜ್ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಚಾಲನೆ ನೀಡಿದರು. ವೀರಗಾಸೆ, ಬ್ಯಾಂಡ್ ಸೆಟ್, ಗೃಹರಕ್ಷಕ ದಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಸೊಬಗು ಹೆಚ್ಚಿಸಿದವು.