ಹಳೇಬೀಡಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ
Jan 29 2024, 01:34 AM IST೭೫ನೇ ಗಣರಾಜ್ಯೋತ್ಸವದ ಅಂಗವಾಗಿ ಹಾಸನ ಜಿಲ್ಲೆಯಾದ್ಯಂತ ೨೬ ರ ಜನವರಿಯಿಂದ ೨೩ರ ಫೆಬ್ರವರಿವರೆಗೆ ಹಾಸನ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ, ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನಡೆಸಲಾಗುವುದು ಎಂದು ಬೇಲೂರು ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿ ರಮೇಶ್ ತಿಳಿಸಿದರು. ಹಳೇಬೀಡಿಗೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿಯ ಸದಸ್ಯರು, ಶಾಲಾ ಮಕ್ಕಳಿಂದ ಭವ್ಯ ಸ್ವಾಗತವನ್ನು ನೀಡಿದರು.