26ರಿಂದ ಜಿಲ್ಲಾಧ್ಯಂತ ಸಂವಿಧಾನ ಜಾಗೃತಿ ಜಾಥಾ: ಸಚಿವ ಆರ್.ಬಿ.ತಿಮ್ಮಾಪುರ
Jan 27 2024, 01:17 AM ISTಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಧ್ವಜಾರೋಹಣ ನೆರವೇರಿಸಿ,ಗೌರವ ವಂದನೆ ಸ್ವೀಕರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಿದರು. ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿ 11 ಚಾಲಕ ಕಂ ನಿರ್ವಾಹಕರಿಗೆ ಸುರಕ್ಷಾ ಚಾಲಕ ಬೆಳ್ಳಿ ಪದಕ ನೀಡಿ ಗೌರವಿಸಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಮಾಹಿತಿ ಕುರಿತಾದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು.