26ರಿಂದ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ
Jan 17 2024, 01:47 AM ISTಬಾಗಲಕೋಟೆ: ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚರಣೆ ಅಂಗವಾಗಿ ಜ.26ರಿಂದ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಮಂಗಳವಾರ ಜರುಗಿದ ವಿಡಿಯೋ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ಸಂವಿಧಾನದ ಮಹತ್ವ ಹಾಗೂ ರಾಷ್ಟ್ರೀಯ ಏಕತೆ ಎತ್ತಿ ಹಿಡಿಯುವ ಉದ್ದೇಶದಿಂದ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳನ್ನೊಳಗೊಂಡ ಸ್ತಬ್ಧ ಚಿತ್ರಗಳೊಂದಿಗೆ ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಸಂಚರಿಸಲಿದೆ ಎಂದು ಹೇಳಿದರು.