ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಘಟನೆ ಕುರಿತು ಉನ್ನತಮಟ್ಟದ ತನಿಖೆ ಆಗಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಬೆಳಗಾವಿ ಚಳಿಗಾಲ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಸೇರಿ ಕೈ ಪಾಳಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಜೋರಾಗಿದ್ದು, ಮೊದಲ ಅವಧಿಯಲ್ಲಿ ಮಂತ್ರಿಗಿರಿ ಕೈ ತಪ್ಪಿದ ನಾಯಕರು ಈ ಬಾರಿಯಾದರೂ ಶತಾಯಗತಾಯ ಕ್ಯಾಬಿನೆಟ್‌ಗೆ ಸೇರ್ಪಡೆ ಆಗಲೆಬೇಕೆಂದು ಪ್ರಯತ್ನ
ರಾಜ್ಯದ 293 ಬಸ್ಸು ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲು ಹಾಗೂ ಚಿಕ್ಕಬಳ್ಳಾಪುರ ನಂದಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರಾಗಿದ್ದ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಚಿಕ್ಕಬಳ್ಳಾಪುರ ಬದಲಿಗೆ ಚಿಂತಾಮಣಿಗೆ ಸ್ಥಳಾಂತರ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಪುನಾರಚನೆ ನಡೆಯುವ ವೇಳೆಯೇ ಸ್ಪೀಕರ್ ಸ್ಥಾನಕ್ಕೂ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ.
‘ಕಾಂಗ್ರೆಸ್ ವಲಯದಲ್ಲಿ ಗುಲ್ಲೆದ್ದಿರುವ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಮೇಲ್ಮನೆಗೆ 4 ಸದಸ್ಯರ ನಾಮನಿರ್ದೇಶನ ಕುರಿತು ಪಕ್ಷದ ಹೈಕಮಾಂಡ್ ಚರ್ಚೆ ಆರಂಭಿಸುವುದೇ ಬೆಳಗಾವಿ ವಿಧಾನಮಂಡಳದ ಚಳಿಗಾಲ ಅಧಿವೇಶನದ ನಂತರ’ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.