ರಾಜ್ಯದ 293 ಬಸ್ಸು ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲು ಹಾಗೂ ಚಿಕ್ಕಬಳ್ಳಾಪುರ ನಂದಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರಾಗಿದ್ದ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಚಿಕ್ಕಬಳ್ಳಾಪುರ ಬದಲಿಗೆ ಚಿಂತಾಮಣಿಗೆ ಸ್ಥಳಾಂತರ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಪುನಾರಚನೆ ನಡೆಯುವ ವೇಳೆಯೇ ಸ್ಪೀಕರ್ ಸ್ಥಾನಕ್ಕೂ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ.
‘ಕಾಂಗ್ರೆಸ್ ವಲಯದಲ್ಲಿ ಗುಲ್ಲೆದ್ದಿರುವ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಮೇಲ್ಮನೆಗೆ 4 ಸದಸ್ಯರ ನಾಮನಿರ್ದೇಶನ ಕುರಿತು ಪಕ್ಷದ ಹೈಕಮಾಂಡ್ ಚರ್ಚೆ ಆರಂಭಿಸುವುದೇ ಬೆಳಗಾವಿ ವಿಧಾನಮಂಡಳದ ಚಳಿಗಾಲ ಅಧಿವೇಶನದ ನಂತರ’ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.