ಡಿಕೆಶಿ ರಕ್ಷಿಸಲು ಸಿಎಂರಿಂದ ಸಚಿವ ಸಂಪುಟ ದುರುಪಯೋಗ-ಕೋಟ
Nov 26 2023, 01:15 AM ISTಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ರಕ್ಷಿಸಲು ಸಿಬಿಐಗೆ ನೀಡಿದ್ದ ಅವರ ಪ್ರಕರಣವನ್ನು ವಾಪಸ್ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಸಚಿವ ಸಂಪುಟವನ್ನೇ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ವಿಪ ಸದಸ್ಯ ಕೋಟ ಶ್ರೀನಿವಾಸ ಪೂಜಾರ ವಾಗ್ದಾಳಿ ನಡೆಸಿದರು. ಈ ಹಿಂದೆ ಸಂವಿಧಾನ ರಕ್ಷಣೆ ಮಾಡಬೇಕು ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಈಗ ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿ ಡಿಕೆಶಿ ವಿರುದ್ಧ ನಡೆಯುತ್ತಿದ್ದ ತನಿಖೆ ನಿಲ್ಲಿಸುವಂತೆ ಮಾಡಿದ್ದು ಸರಿಯಲ್ಲ. ಸದ್ಯಕ್ಕೆ ನಮ್ಮ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಆದರೂ ಸಹಿತ ಸಿಎಂ, ಡಿಸಿಎಂ ರೈತರ ಹೊಲಗಳಿಗೆ ಹೋಗಿ ಧೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ; ಪರಿಹಾರ ಕೊಡುತ್ತಿಲ್ಲ. ಮುಂದಿನ ದಿನಮಾನಗಳಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಲಿದೆ ಎಂದರು.