ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಇಂದಿನಿಂದ (ಏ.7) ಮೂರು ದಿನ ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ದೇಶದ ಗಡಿ ಬಗ್ಗೆ ಸಚಿವ ಸಂತೋಷ ಲಾಡ್ ವಿಚಾರ ಮಾಡಿ ಮಾತನಾಡಬೇಕು. ಈ ವಿಚಾರದಲ್ಲಿ ನಮ್ಮನ್ನು, ನಮ್ಮ ಸರ್ಕಾರ ನಂಬದೇ ಇದ್ದರೂ ಸೈನ್ಯವನ್ನು ನಂಬಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.