೩೦ರಂದು ಕುಕ್ಕೆಗೆ ಸಚಿವ ರಾಮಲಿಂಗ ರೆಡ್ಡಿ ಭೇಟಿ
Jun 29 2025, 01:32 AM ISTಮಾಜಿ ಸಚಿವ ಮಾಲೂರು ಎಸ್.ಎನ್.ಕೃಷ್ಣಯ್ಯ ಶೆಟ್ಟಿ, ಆಶ್ಲೇಷ ಮಂದಿರದ ದಾನಿಗಳಾಗಿದ್ದು, ಒಂದು ಸಾವಿರ ಮಂದಿಗೆ ಆಶ್ಲೇಷ ಬಲಿ ಸೇವೆ ನೆರವೇರಿಸಲು ಅವಕಾಶ ಇರುವಷ್ಟು ದೊಡ್ಡ ಮಂದಿರ ನಿರ್ಮಾಣವಾಗಲಿದೆ. ಬೆಳಗ್ಗೆ ೧೧.೩೦ಕ್ಕೆ ಸಚಿವ ರಾಮಲಿಂಗ ರೆಡ್ಡಿ ಆಶ್ಲೇಷ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.