ರಾಜ್ಯದಲ್ಲಿ ಮುಜರಾಯಿ ದೇವಾಲಯಗಳ ಅರ್ಚಕರ ತಸ್ತಿಕ್ 60-72 ಸಾವಿರಕ್ಕೆ ಏರಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ವಿಪಕ್ಷ ಕಾಂಗ್ರೆಸ್ ನಾಯಕರನ್ನು ಬುಧವಾರ ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ವಕ್ಫ್ ಆಸ್ತಿ ಕಬಳಿಕೆ ವಿವಾದಗಳನ್ನು ಎಳೆಎಳೆಯಾಗಿ ಪ್ರಸ್ತಾಪಿಸಿ ಬಿಸಿ ಮುಟ್ಟಿಸಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ವಕ್ಫ್ ತಿದ್ದುಪಡಿ ವಿಧೇಯಕ ಯಾವುದೇ ಧರ್ಮದ ವಿರೋಧಿಯೂ ಅಲ್ಲ, ಯಾರ ಆಸ್ತಿಯನ್ನು ಕಿತ್ತುಕೊಳ್ಳುವುದೂ ಇಲ್ಲ. ಒಂದು ವೇಳೆ ಈ ಕಾಯ್ದೆಗೆ ತಿದ್ದುಪಡಿ ಮಾಡದೆ ಹೋದರೆ ಮುಂದೆ ಸಂಸತ್ ಕಟ್ಟಡವನ್ನೂ ವಕ್ಫ್ ತನ್ನದೆಂದು ಹೇಳಿಕೊಳ್ಳಬಹುದು ಎಂದು ಹೇಳಿದರು.
ಒಂದೆಡೆ ತಮ್ಮ ಆಪಾದನೆಗೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು ಸಾಕ್ಷ್ಯ ನೀಡದೆ, ಮತ್ತೊಂದೆಡೆ ಪೂರಕವಾದ ಪುರಾವೆಗಳು ಪತ್ತೆಯಾಗದೆ ಹನಿಟ್ರ್ಯಾಪ್ ಯತ್ನ ಪ್ರಕರಣವೆಂಬುದು ಸಿಐಡಿ ವಿಚಾರಣಾ ತಂಡಕ್ಕೆ ತಲೆನೋವಾಗಿ ಪರಿಣಿಸಿದೆ.