ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ವೈದ್ಯಕೀಯ ಉಪಕರಣಗಳ ಖರೀದಿಯ ಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿ ಖಾತಂಡ (ಎಸ್‌ಐಟಿ) ಮತ್ತು ಸಚಿವ ಸಂಪುಟದ ಉಪಸಮಿತಿ ರಚಿಸುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.
ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ, ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’, ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್ ಸೌತ್ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಗ್ರೇಸ್ ಅಂಕ ನೀಡುವ ಪದ್ಧತಿ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.