ಉಸ್ತುವಾರಿ ಸಚಿವ ಬೈರತಿ ಸುರೇಶ್ ರಿಂದ ಜಿಲ್ಲೆ ನಿರ್ಲಕ್ಷ್ಯ
Aug 08 2024, 01:38 AM ISTಇಡೀ ಏಷ್ಯಾದಲ್ಲೇ ದೊಡ್ಡ ಮಾರುಕಟ್ಟೆಯಾಗಿರುವ ಎಪಿಎಂಸಿ ಮಾರುಕಟ್ಟೆಗೆ ಜಾಗದ ಸಮಸ್ಯೆ ಬಗೆಹರಿಸುವ ಕುರಿತು ಸಭೆ, ಸಮಾರಂಭಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡುತ್ತಾರೆಯೇ ಹೊರತು, ಅದನ್ನು ಶಾಶ್ವತವಾಗಿ ನಿವಾರಿಸುವ ಗೋಜಿಗೆ ಹೋಗಿಲ್ಲ. ಸಚಿವರು ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಾತ್ರ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಎರಡೆರಡು ದಿನಕ್ಕೆ ಜಿಲ್ಲೆಗೆ ಆಗಮಿಸುತ್ತಾರೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಒತ್ತುನೀಡುವ ಭರವಸೆಯು ಭರವಸೆಯಾಗಿಯೇ ಉಳಿಯುವುದು ಬಿಟ್ಟರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ.