ಕೆಂಪೇಗೌಡರ ತತ್ವ, ಸಿದ್ಧಾಂತ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಸಚಿವ ಎಂ.ಸಿ.ಸುಧಾಕರ್
Jun 29 2024, 12:31 AM ISTಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತ ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡಣೆ ಮಾಡಲಿಲ್ಲ. ಎಲ್ಲ ಜನಾಂಗ, ಜಾತಿಯವರನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದ್ದರು. ಅವರ ಆಡಳಿತ ಕಾಲದಲ್ಲೇ ಅವರು ಕೈಗೊಂಡ ಅಭಿವೃದ್ಧಿಯನ್ನು ನೋಡಿದರೆ ಅವರೊಬ್ಬ ಜಾತ್ಯಾತೀತ ವ್ಯಕ್ತಿಯಾಗಿದ್ದರು.