ಗೀತಕ್ಕ ಸೋತರೂ ಜನರ ಮನಸ್ಸು ಗೆದ್ದಿದ್ದಾರೆ: ಸಚಿವ ಮಧು ಬಂಗಾರಪ್ಪ
Jun 11 2024, 01:32 AM IST ಕೇಂದ್ರದಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಆಯ್ಕೆಗೆ ಬೆಲೆ ಕೊಡಬೇಕು. ಅವರ ಅಭಿಪ್ರಾಯವನ್ನು ಗೌರವಿಸಬೇಕು. ಆದ್ದರಿಂದ, ಈ ಸೋಲು ಮುಂದಿನ ಬದಲಾವಣೆಗೆ ಸ್ಫೂರ್ತಿ ಆಗಲಿದೆ. ಚುನಾವಣೆಯಲ್ಲಿ 5.30 ಲಕ್ಷ ಮತ ಪಡೆಯುವ ಮೂಲಕ ಕ್ಷೇತ್ರದ ಮತದಾರರ ಹೃದಯ ಗೆದ್ದಿದ್ದೇವೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬಿ ಬಡವರ ಹಸಿವು ನೀಗಿಸುತ್ತಿದೆ.