‘ಹಿಂದೂ’ ಎಂಬುದು ಅಶ್ಲೀಲ ಪದ ಎನ್ನುವ ಮೂಲಕ ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಆ.27ಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.
ಶಿವಮೂರ್ತಿ ಶಿವಾಚಾರ್ಯರ ಶ್ರೀಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಳ್ಳೆಯ ಆಡಳಿತ ಸಹಿಸಲು ಆಗದೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಅಲ್ಪಸಂಖ್ಯಾತರ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದರು.